ಮಂಗಳೂರು : ಉಪಲೋಕಾಯುಕ್ತರಾದ ನ್ಯಾ. ಬಿ. ವೀರಪ್ಪ ಅವರು ಭಾನುವಾರದಂದು ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಆಸ್ಪತ್ರೆಯ ವಿವಿಧ ವಾಡು೯ಗಳಿಗೆ ಭೇಟಿ ನೀಡಿ ರೋಗಿಗಳೊಂದಿಗೆ ಮಾತನಾಡಿ ಅವರ ಅಹವಾಲುಗಳನ್ನು ಸ್ವೀಕರಿಸಿದರು. ಆಸ್ಪತ್ರೆಯ ಔಷಧ ದಾಸ್ತಾನನ್ನು ಪರಿಶೀಲಿಸಿದ ಉಪಲೋಕಾಯುಕ್ತರು, ಮಕ್ಕಳ ಆಸ್ಪತ್ರೆಗೂ ಭೇಟಿ ನೀಡಿದ್ದಾರೆ. ಆಸ್ಪತ್ರೆಯ ಶೌಚಾಲಯಕ್ಕೆ ಭೇಟಿ ನೀಡಿ, ಸ್ವಚ್ಚತೆಯ ಕುರಿತು ಅಸಮಾಧಾನವನ್ನು ವ್ಯಕ್ತಪಡಿಸಿದಾರೆ. ಆ ನಂತರ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದಭ೯ದಲ್ಲಿ ಜಿಲ್ಲಾಧಿಕಾರಿಯಾದ ಮುಲ್ಲೈ ಮುಹಿಲನ್, ಜಿ.ಪಂ. ಸಿಇಓ ಡಾ. ಆನಂದ್, ವೆನ್ ಲಾಕ್ ಅಧೀಕ್ಷಕರಾದ ಡಾ. ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

