ಉಡುಪಿ: ಶ್ರೀಕೃಷ್ಣ ಮಠಕ್ಕೆ ದರ್ಶನಕ್ಕೆ ಬಂದಿದ್ದ ಕೇರಳದ ಮಹಿಳೆಯ ಸರ ಕಳವಾಗಿರುವ ಘಟನೆ ನಡೆದಿದೆ.
ಕೇರಳದ ಸರಸ್ವತಿ(71) ಎಂಬವರು ಕುಟುಂಬದೊಂದಿಗೆ ಉಡುಪಿ ಕೃಷ್ಣ ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆದಿದ್ದರು. ನಂತರ ಅನಂತೇಶ್ವರ ದೇವಾಸ್ಥಾನದ ಬಳಿ ಹೋಗಿ ನೋಡಿದಾಗ ಅವರು ಧರಿಸಿದ್ದ 32 ಗ್ರಾಂ ತೂಕದ ಚಿನ್ನದ ಸರ ಕಳವಾಗಿರುವುದು ಕಂಡುಬಂದಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

