ಅಮಿತಾಭ್ ಬಚ್ಚನ್ ಅವರು ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ ರಿಯಾಲಿಟಿ ಶೋನಲ್ಲಿ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.
ಸದ್ಯ ಶಿವರಾಜ್ ಕುಮಾರ್ ಅವರು ಚಿಕಿತ್ಸೆಗೆಂದು 18ರಂದು ಅಮೆರಿಕಕ್ಕೆ ತೆರಳಲಿದ್ದಾರೆ ಎನ್ನುವ ಮಾಹಿತಿಯಿದೆ. ಇದಕ್ಕೂ ಮೊದಲು ಮುಂಬೈಗೆ ತೆರಳಿ ನಟ ಅಮಿತಾಭ್ ಬಚ್ಚನ್ ಅವರು ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿಯಿದೆ.
ಡಿಸೆಂಬರ್ ಹತ್ತರಂದು ಈ ಕಾರ್ಯಕ್ರಮವು ಫಿಕ್ಸ್ ಆಗಿತ್ತು. ‘ಕೌನ್ ಬನೇಗಾ ಕರೋಡ್ಪತಿ’ ಶೂಟಿಂಗ್ನಲ್ಲಿ ಶಿವರಾಜ್ ಕುಮಾರ್ ಅವರು ಭಾಗಿಯಾಗಬೇಕಿತ್ತು. ಆದರೆ ಅಮಿತಾಭ್ ಅವರ ಅನಾರೋಗ್ಯದ ಕಾರಣದಿಂದಾಗಿ ಚಿತ್ರೀಕರಣವನ್ನು ಇಂದಿಗೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಮೊದಲ ಬಾರಿಗೆ ಕನ್ನಡದ ನಟನೊಬ್ಬರಿಗೆ ಈ ಶ್ರೇಯಸ್ಸು ಸಿಕ್ಕಿದ್ದು, ಇದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಶ್ಲಾಘನೆ ವ್ಯಕ್ತವಾಗುತ್ತಿದೆ.
ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿಯಲ್ಲಿ ಶಿವರಾಜ್ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಡಿಸೆಂಬರ್ 18ಕ್ಕೆ ಅವರು ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಡಿಸೆಂಬರ್ 24ರಂದು ಸರ್ಜರಿ ನಡೆಯಲಿದೆ ಎಂಬ ಮಾಹಿತಿಯಿದೆ.

