ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರು ತಮ್ಮ ಬದುಕಿನ ಪಯಣ ಮುಗಿಸಿದ್ದು ಇಂದು ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಾದ ಸೋಮನಹಳ್ಳಿಯಲ್ಲಿ ನಡೆಯಲಿರುವುದು.
ಬೆಳಗ್ಗೆ 8 ಗಂಟೆಗೆ ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುವುದು, ಮತ್ತು ಕೆಂಗೇರಿ, ರಾಮನಗರ, ಚನ್ನಪಟ್ಟಣಗಳಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಂಜೆ 3 ಗಂಟೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರವು ನೆರವೇರಲಿದೆ. ಸಿಎಂ ಸಿದ್ದರಾಮಯ್ಯ, ಸಚಿವರು, ಪ್ರಹ್ಲಾದ್ ಜೋಶಿ, ಕುಮಾರಸ್ವಾಮಿ ಸೇರಿದಂತೆ ರಾಜಕೀಯ ಗಣ್ಯರು, ಸ್ವಾಮೀಜಿಗಳು, ಅಪಾರ ಅಭಿಮಾನಿಗಳು ಭಾಗವಹಿಸಲಿದ್ದಾರೆ.

