ಹೊಸವರ್ಷದ ಜ.21 ರಿಂದ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ, ಏರ್ ಇಂಡಿಯಾ ಎಕ್ಸ್ಪ್ರೆಸ್ ಸಿಂಗಾಪುರಕ್ಕೆ ನೇರ ವಿಮಾನ ಹಾರಾಟವು ಪ್ರಾರಂಭವಾಗಲಿದೆ.
ಮಂಗಳವಾರ ಮತ್ತು ಶುಕ್ರವಾರದಂದು ಸಿಂಗಾಪುರಕ್ಕೆ ನೇರ ವಿಮಾನ ಸೇವೆ ಇರುತ್ತದೆ. ಸಂಸದ ಬ್ರಿಜೇಶ್ ಚೌಟ ಅವರು ಸೆಪ್ಟೆಂಬರ್ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರಕ್ಕೆ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ ಮನವಿ ಸಲ್ಲಿಸಿದ್ದರು.
ಫೆಬ್ರವರಿ 1ರಿಂದ ರಾಜಧಾನಿ ದಿಲ್ಲಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ತಡೆರಹಿತ ವಿಮಾನ ಹಾರಾಟ ಸೌಲಭ್ಯವನ್ನು ಆರಂಭಿಸಲಿದೆ.

