ಕಾರ್ಕಳದ ಕುಕ್ಕುಂದೂರು ಗ್ರಾಮದ ಬಸ್ರಿಯ ನಿವಾಸಿಯಾದ ಶಮನ್ ಶೆಟ್ಟಿ (21) ಅವರು ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ರಾಮಯ್ಯ ಕಾಲೇಜಿನ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಯಾಗಿದ್ದ ಶಮನ್ ಡಿ. 10ರಂದು ರಾತ್ರಿ 11 ಗಂಟೆ ಸುಮಾರಿಗೆ ವಿಮಾನ ನಿಲ್ದಾಣ ರಸ್ತೆಯ ಡಿವೈಡರ್ಗೆ ಬೈಕ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ತಂದೆ, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.

