ಉಡುಪಿ : ಕಾರ್ಕಳ ತಾಲೂಕಿನ ಬಂಗ್ಲೆಗುಡ್ಡೆಯ ಧಾರ್ಮಿಕ ಶಿಕ್ಷಣ ಸಂಸ್ಥೆಯಾದ ತ್ವೈಬಾ ಗಾರ್ಡನ್ ಮುಖ್ಯಸ್ಥ ಸಅದಿ ಕಿಲ್ಲೂರು, ಬಾಲಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಾಲಕನ ಮೈ ಮೇಲೆ ಬರೆ ಬರುವ ರೀತಿಯಲ್ಲಿ ಹೊಡೆಯಲಾಗಿದೆ. ಇದರಿಂದ ಆಕ್ರೋಶಗೊಂಡಿರುವ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಅಳಲು ತೋಡಿಕೊಂಡಿದ್ದಾರೆ. ಬಾಲಕನಿಗೆ ಹೊಡೆದಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಈ ಘಟನೆಯ ಬೆನ್ನಲ್ಲಿ ಹಲ್ಲೆ ನಡೆಸಿರುವ ಸಂಸ್ಥೆಯ ಮುಖ್ಯಸ್ಥನಾದ ಸಅದಿ ಕಿಲ್ಲೂರನನ್ನು ವಜಾ ಮಾಡಲಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

