ಪುಷ್ಪ-2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ನಟ ಅಲ್ಲು ಅರ್ಜುನ್ ಗೆ ನಾಂಪಲ್ಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನವನ್ನು ವಿಧಿಸಿದೆ
ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದಳು. ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ತೆಲಂಗಾಣ ಚಿಕ್ಕಡಪಲ್ಲಿ ಪೊಲೀಸರು ಇಂದು ಬೆಳಗ್ಗೆ ಅರೆಸ್ಟ್ ಮಾಡಿದ್ದರು, ಈಗ ನಾಂಪಲ್ಲಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನವನ್ನು ನಟ ಅಲ್ಲು ಅರ್ಜುನ್ ಗೆ ವಿಧಿಸಿದೆ.

