ನ.17 ರಂದು ನಡೆದ ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಶಶೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾರಿಗಾದರೂ ಅನ್ಯಾಯವಾಗಿದ್ದಲ್ಲಿ ಅವರಿಗೆ ನ್ಯಾಯ ಒದಗಿಸಲಾಗುವುದು ಎಂದರು.
ಪಿಡಿಒ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಪ್ರತಿಭಟನೆ ಮಾಡಿದ 12 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.

