ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಎರಡನೇ ದಿನದ ಕಲಾಪದಲ್ಲಿ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ಅವರು ಆನೆ ಹಾವಳಿಯ ತಡೆಗಟ್ಟುವ ಬಗ್ಗೆ ಮಾತನಾಡುವಾಗ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸರ್ಕಾರವು ಆನೆ ಹಾವಳಿಯನ್ನು ತಡೆಗಟ್ಟಬೇಕು ಇಲ್ಲವಾದರೆ, ಆನೆಗಳನ್ನು ಕೊಲ್ಲಲು ನಮಗೆ ಅವಕಾಶ ಕೊಡಿ ಎಂದು ಕಲಾಪದಲ್ಲಿ ಆಗ್ರಹಿಸಿದರು.
ಗ್ರಾಮೀಣ ಭಾಗದ ಜನರು ಆನೆಯ ಹಾವಳಿಯಿಂದ ನೆಮ್ಮದಿಯಿಂದ ಇರೋಕೆ ಸಾಧ್ಯವಾಗುತ್ತಿಲ್ಲ, ಗ್ರಾಮೀಣ ಜನರು ತತ್ತರಿಸಿ ಹೋಗಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸ್ಪಂದನೆ ಕೊಡುತ್ತಿಲ್ಲ. ಪರಿಹಾರ ಕೊಡಲು ಅಸಾಧ್ಯವಾದರೆ ರೈತರಿಗೆ ಆನೆಗಳನ್ನು ಕೊಲ್ಲಲು ಅವಕಾಶ ಕೊಡಿ. ಇದಕ್ಕೆ ಶಾಶ್ವತವಾದ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

