ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರು ಶಸ್ತ್ರ ಚಿಕಿತ್ಸೆ ಮಾಡಿಸದೆ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊಸಕೆರೆಹಳ್ಳಿ ಅಪಾರ್ಟ್ಮೆಂಟ್ಗೆ ತೆರಳಿದ್ದಾರೆ.
ಬೆನ್ನು ನೋವಿಗೆ ಸಂಬಂಧಿಸಿದ ಸರ್ಜರಿ ಮಾಡಿಕೊಳ್ಳಲು ದರ್ಶನ್ಗೆ ಹೈಕೋರ್ಟ್ 6 ವಾರಗಳ ಜಾಮೀನು ಅನ್ನು ನೀಡಿತ್ತು.
ನಟ ದರ್ಶನ್ ಅವರಿಗೆ ಡಿಸೆಂಬರ್ 13ರಂದು ಹೈಕೋರ್ಟ್ ಪೂರ್ಣ ಪ್ರಮಾಣದ ಜಾಮೀನು ಅನ್ನು ನೀಡಿದೆ. ಪೂರ್ಣ ಪ್ರಮಾಣದ ಜಾಮೀನು ಸಿಕ್ಕ 5 ದಿನಗಳ ನಂತರ ದರ್ಶನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪತ್ನಿ ವಿಜಯಲಕ್ಷ್ಮಿಯೊಂದಿಗೆ ಹೊಸಕೆರೆಹಳ್ಳಿಯ ಫ್ಲ್ಯಾಟ್ಗೆ ಆಗಮಿಸಿದ್ದಾರೆ. ಪತ್ನಿ, ಮಗ ಹಾಗೂ ಧನ್ವೀರ್ ಜೊತೆಗೆ ಮನೆಗೆ ಬಂದಿದ್ದಾರೆ. ನಟ ದರ್ಶನ್ ಅನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಲಿರುವ ಕಾರಣ ದರ್ಶನ್ ಹೊಸಕೆರೆಹಳ್ಳಿ ಅಪಾರ್ಟ್ಮೆಂಟ್ಗೆ ಬರುತ್ತಿದ್ದಂತೆ ಸೆಕ್ಯೂರಿಟಿ ಸಿಬ್ಬಂದಿ ಗೇಟ್ ಅನ್ನು ಮುಚ್ಚಿದ್ದಾರೆ.
ನಟ ದರ್ಶನ್ ಡಿಸ್ಚಾರ್ಜ್ ಆಗಿ ಮನೆಗೆ ಬಂದಿರುವ ಸುದ್ದಿ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

