ಉಡುಪಿ: ನಿಟ್ಟೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಕೊಂಬಳಿ ಗ್ರಾಮದ ನಿವಾಸಿ ಗಂಗಮ್ಮ (30) ಎಂಬವರು ನಾಪತ್ತೆಯಾದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಡಿ. 31ರಂದು ತನ್ನ 5 ವರ್ಷದ ಮಗನೊಂದಿಗೆ ಮನೆಯಿಂದ ಹೊರಗೆ ಹೋದವರು ವಾಪಸ್ ಬಾರದೇ ನಾಪತ್ತೆಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹತ್ತಿರದ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟನೆ ತಿಳಿಸಿದೆ.

