ಬೆಂಗಳೂರು: ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಲು ಹೆಜ್ಜೆ ಇಟ್ಟಿರುವ ಕಾಂಗ್ರೆಸ್ ಸರ್ಕಾರದ ಮುಂದೆ ನಿನ್ನೆ (ಬುಧವಾರ) 6 ನಕ್ಸಲ್ ನಾಯಕರು ಶರಣಾಗಿದ್ದರು.
ರಾಜ್ಯದ ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್ಪಿ ಬಾಲಾಜಿ ಸಿಂಗ್ ಎನ್ಐಎ ವಿಶೇಷ ಕೋರ್ಟ್ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಆ ಆರು ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ಶರಣಾದ 6 ನಕ್ಸಲರನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದರು. ಸಿಟಿ ಸಿವಿಲ್ ಕೋರ್ಟ್ ಸಂಕೀರ್ಣದ NIA ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ನಕ್ಸಲರನ್ನು ಕೋರ್ಟ್ಗೆ ಹಾಜರು ಪಡಿಸಿರುವ ಹಿನ್ನೆಲೆಯಲ್ಲಿ ಖುದ್ದು ಡಿಸಿಪಿ ಹೆಚ್.ಟಿ. ಶೇಖರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ವಹಿಸಲಾಗಿತ್ತು. ನಕ್ಸಲರನ್ನು ಕೋರ್ಟ್ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖಚಿತಪಡಿಸಿಕೊಳ್ಳಲಾಗಿತ್ತು.

