ಉತ್ತರ ಪ್ರದೇಶ: ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಸುಮಾರು 12ಕ್ಕೂ ಹೆಚ್ಚು ಸಿಲಿಂಡರ್ಗಳು ಸ್ಫೋಟಗೊಂಡಿರುವಂತಹ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಟೆಂಟ್ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸುತ್ತಿದೆ. ಸದ್ಯ ಯಾವುದೇ ಸಾವು ನೋವು ಸಂಭವಿಸಿಲ್ಲ.

ವಿವೇಕಾನಂದ ಸೇವಾ ಸಮಿತಿಗೆ ಸೇರಿದ 25ಕ್ಕೂ ಹೆಚ್ಚು ಟೆಂಟ್ಗಳಿಗೆ ಬೆಂಕಿ ಹತ್ತಿಕೊಂಡಿದೆ. ಟೆಂಟ್ಗಳಲ್ಲಿ ಇಟ್ಟಿದ್ದ ಸಿಲಿಂಡರ್ಗಳು ಒಂದೊಂದಾಗಿ ಸ್ಫೋಟಗೊಳ್ಳುತ್ತಿರುವುದರಿಂದ ಬೆಂಕಿ ತೀವ್ರತೆ ಹೆಚ್ಚಾಗುತ್ತಿದೆ. ಬೆಂಕಿ ಅವಘಡದಿಂದಾಗಿ ಮಹಾ ಕುಂಭಮೇಳ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಟೆಂಟ್ನಲ್ಲಿ ಇರುವವರನ್ನು ಅಧಿಕಾರಿಗಳು ದೂರ ಕಳಿಸುತ್ತಿದ್ದಾರೆ.

ಸದ್ಯ ಸ್ಥಳಕ್ಕಾಗಮಿಸಿದ 50ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಆರಂಭವಾಗಿದೆ. ಅಗ್ನಿ ಅವಘಡದ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಮಾಹಿತಿ ಪಡೆದುಕೊಂಡಿದ್ದಾರೆ.



