ಸಾಸ್ತಾನ: ಏಪ್ರಿಲ್ 1,2 & 3 ರಂದು ಸಾಲಿಗ್ರಾಮ ಹಳೆಕೋಟೆ ಮೈದಾನದಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಇವತ್ತು ಸಾಸ್ತಾನ ಶಿವಕೃಪಾ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷರಾದ ಎಂ.ಸಿ.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ವಿಠ್ಠಲ ಪೂಜಾರಿ ಐರೋಡಿ, ವಿದ್ವಾನ್ ವಿಜಯ ಮಂಜರು, ಪ್ರತಾಪ ಶೆಟ್ಟಿ ಸಾಸ್ತಾನ, ಸುಬ್ರಾಯ ಆಚಾರ್ಯ ಇತರರು ಭಾಗವಹಿಸಿದ್ದರು.

ಸಭೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಯಶಸ್ಸಿಗಾಗಿ ವಿವಿಧ ಸಮಿತಿಗಳ ರಚನೆ , ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು.

ಪೂರ್ವಭಾವಿ ಸಭೆಯಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಸೇರಿ ಎಲ್ಲಾ ಪ್ರಮುಖರು ಹಾಜರಿದ್ದರು.


