ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ನಡೆದ ದಾಳಿಯ ಹಿನ್ನೆಲೆಯಲ್ಲಿ ಮಾಧ್ಯಮದೊಂದಿಗೆ ಮಾತಾಡುತ್ತಿರುವಾಗಲೇ ರಾಮ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ್ ರವರನ್ನು ಬಂಧಿಸಲಾಗಿದೆ.

ಪ್ರಸಾದ್ ಅತ್ತಾವರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಮಂಗಳೂರಿನ ಕುಡುಪು ಬಳಿಯ ಪ್ರಸಾದ್ ಅತ್ತಾವರ ನಿವಾಸದಿಂದ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾಳಿ ನಡೆಸಿದ ಉಳಿದ ಕಾರ್ಯಕರ್ತರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.





