ಕನ್ನಡ ಚಿತ್ರರಂಗದಲ್ಲಿ ಅದ್ಭುತ ಸಿನಿಮಾ ನೀಡುತ್ತಾ ಸಿನಿಪ್ರೇಕ್ಷಕರಿಗೆ ಸಾಕಷ್ಟು ಭಿನ್ನ ರೀತಿಯ ಸ್ವಾದವನ್ನು ಉಣಬಡಿಸಿದವರು ಹಿರಿಯ ನಿರ್ದೇಶಕ ಎಸ್.ವಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ಅರುಣ್ ರೈ ತೋಡಾರ್ ಅವರ ನಿರ್ಮಾಣದಲ್ಲಿ ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಮೂಡಿಬರುತ್ತಿರುವ “ವೀರ ಕಂಬಳ” ಚಿತ್ರಕ್ಕೆ ವಿದೇಶಗಳಲ್ಲಿ ಒಂದಾದ ದುಬೈನಲ್ಲೂ ಚಿತ್ರೀಕರಣವಾಗಿದೆ. ಇತ್ತೀಚೆಗೆ ದುಬೈನಲ್ಲಿ ಚಿತ್ರೀಕರಣ ಮುಗಿಸಿದ ಚಿತ್ರತಂಡ ಬೆಂಗಳೂರಿಗೆ ಹಿಂತಿರುಗಿದೆ. ನಟ ಆದಿತ್ಯ, ನಿರ್ಮಾಪಕ ಅರುಣ್ ರೈ ತೊಡರ್, ಶೋಭರಾಜ್ ಪಾವೂರು ಮುಂತಾದವರು ದುಬೈನಲ್ಲಿ ನಡೆದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು.
ಕಂಬಳ ಕರಾವಳಿಯ ಒಂದು ಪ್ರಖ್ಯಾತವಾದ ಕ್ರೀಡೆ. ಇದನ್ನೇ ಪ್ರಧಾನ ವಸ್ತುವನ್ನಾಗಿಟ್ಟುಕೊಂಡು ರಾಜೇಂದ್ರ ಸಿಂಗ್ ಬಾಬು ಅವರು “ವೀರ ಕಂಬಳ” ಚಿತ್ರದ ಕಥೆ ಬರೆದಿದ್ದಾರೆ. ಈ ಚಿತ್ರ ಕನ್ನಡದಲ್ಲಿ “ವೀರ ಕಂಬಳ” ಎಂಬ ಹೆಸರಿನಿಂದ ಹಾಗೂ ತುಳುವಿನಲ್ಲಿ “ಬಿರ್ದುದ ಕಂಬಳ” ಎಂಬ ಹೆಸರಿನಲ್ಲಿ ಮೂಡಿ ಬರುತ್ತಿದೆ.
ವೀರ ಕಂಬಳ”ಕ್ಕೆ ಖ್ಯಾತ ಕಥೆ ರಚನೆಕಾರ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಆರ್ ಗಿರಿ ಛಾಯಾಗ್ರಹಣ, ಶ್ರೀನಿವಾಸ್ ಪಿ ಬಾಬು ಸಂಕಲನ, ಮದನ್ – ಹರಿಣಿ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ, ಮಾಸ್ ಮಾದ ಸಾಹಸ ನಿರ್ದೇಶನ, ಚಂದ್ರಶೇಖರ ಸುವರ್ಣ ಮುಲ್ಕಿ ಕಲಾ ನಿರ್ದೇಶನ ಹಾಗೂ ಬೆನಕ ಕೊಟ್ರೇಶ್, ಅಕ್ಷತ ವಿಟ್ಲ ಅಸೋಸಿಯೇಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದಾರೆ.


