ಹಾಸನ:- ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸಂದರ್ಭ ಪಾದಾಚಾರಿಗಳ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ದುರಂತ ಅಂತ್ಯ ಕಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನದ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯದ ಕೆ.ಆರ್ ಪೇಟೆಯ ಸುರೇಶ್ ಮತ್ತು ಕುಮಾರ್ ಎಂಬವರು ಮೃತ ದುರ್ದೈವಿಗಳಾಗಿದ್ದಾರೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಸ್ ಬಂದು ಢಿಕ್ಕಿ ಹೊಡೆದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದಿನೇಶ್ ಎಂಬವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.


