ಚಿಕ್ಕಮಗಳೂರು: ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಮಾ.15ರಿಂದ ಮಾ.17ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದ್ದು ಜಿಲ್ಲಾಡಳಿತ ಸೂಚನೆ ಹೊರಡಿಸಿದೆ.
ದತ್ತಪೀಠದಲ್ಲಿ ಉರೂಸ್ ಹಬ್ಬ ಜರುಗಲಿರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದ್ದು ಸುರಕ್ಷತೆ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಬುಕ್ಕಿಂಗ್ ಮಾಡಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶಕ್ಕೆ ಪರ್ಮಿಷನ್ ಇರಲಿದೆ.
ದತ್ತಪೀಠ, ಮುಳ್ಳಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್ ಗೆ ಟೂರಿಸ್ಟ್ ಗಳಿಗೆ ಪ್ರವೇಶ ಇರುವುದಿಲ್ಲ. ಸ್ಥಳೀಯ ನಿವಾಸಿಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.


