ಕಾರ್ಕಳ: ಮೀನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಪಡುಬಿದ್ರೆಯಿಂದ ಕಾರ್ಕಳಕ್ಕೆ ಮೀನು ತುಂಬಿಸಿಕೊಂಡು ಹೋಗುತ್ತಿದ್ದಾಗ ಲಾರಿ ಕಾರ್ಕಳದ ಪುಲ್ಕೇರಿಯಲ್ಲಿ ಇದ್ದಕಿದ್ದಂತೆ ಪಲ್ಟಿಯಾಗಿದೆ.
ಲಾರಿಯಲ್ಲಿ ಚಾಲಕ ಸೇರಿದಂತೆ ಇಬ್ಬರಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೀನುಗಳು ರಸ್ತೆಯಲ್ಲಿ ಬಿದ್ದು ಚೆಲ್ಲಾಪಿಲ್ಲಿಯಾಗಿದೆ.


