ಕಾರ್ಕಳ : ಕಾರ್ಕಳ ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟ್ಟೊ ಅವರು ಮಾ. 13ರಂದು ಅಧಿಕಾರ ಸ್ವೀಕರಿಸಿದರು. ಮೂಲತಃ ವಿರಾಜಪೇಟೆಯವರಾಗಿರುವ ಲೀನಾ ಬ್ರಿಟ್ಟೊ ಈ ಹಿಂದೆ ಬಂಟ್ವಾಳ ಪುರಸಭೆಯಲ್ಲಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಪುತ್ತೂರು, ಸುಳ್ಯ, ಮೂಡಿಗೆರೆ ಪುರಸಭೆಗಳಲ್ಲಿ ಕಾರ್ಯನಿರ್ವಹಿಸಿದ್ದ ಲೀನಾ ಅವರು ಬಂಟ್ವಾಳ ಪುರಸಭೆಗೆ ಸವಾಲು ಆಗಿದ್ದ ತ್ಯಾಜ್ಯ ವಿಲೇವಾರಿಗೆ ಶಾಶ್ವತ ಪರಿಹಾರ ಒದಗಿಸಿದ್ದರು. ತ್ಯಾಜ್ಯ ವಿಂಗಡಣೆ ನಿರ್ವಹಣೆ ಘಟಕ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

