ಚಿಕ್ಕಮಗಳೂರು: ವಸತಿ ಶಾಲೆಯಲ್ಲಿದ್ದ ಇಬ್ಬರು ಬಾಲಕರು ಇದ್ದಕಿದ್ದಂತೆ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ತರುಣ್ ಮತ್ತು ಯಶ್ವಿತ್ ಸಾಲಿಯಾನ್ ಇಬ್ಬರು ನಾಪತ್ತೆಯಾಗಿರುವ ವಿದ್ಯಾರ್ಥಿಗಳಾಗಿದ್ದಾರೆ. ಕಳೆದ ಹತ್ತು ದಿನಗಳ ಹಿಂದೆ ನಾಪತ್ತೆಯಾದ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಸತಿ ಶಾಲೆಯಲ್ಲಿ ಇರಲು ಹಿಂದೇಟು ಹಾಕಿ ಓಡಿ ಹೋಗಿದ್ದರ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈ ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭ ಮಾಡಿದ್ದು ವಿದ್ಯಾರ್ಥಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳು ನಾಪತ್ತೆಯಾಗುತ್ತಿರುವುದರ ಬಗ್ಗೆ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.


