ಕುಂದಾಪುರ: ಹೋಳಿ ಹಬ್ಬದ ಆಚರಣೆಯ ಹಿನ್ನೆಲೆ ಕುಂದಾಪುರದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ನಿಷೇಧ ಮಾಡಲಾಗಿದೆ.
ಗಂಗೊಳ್ಳಿ, ಗುಜ್ಜಾಡಿ ಹಾಗೂ ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಬೆಳಿಗ್ಗೆ ಆರರಿಂದ ರಾತ್ರಿ ಹನ್ನೆರಡು ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಹೋಳಿ ಆಚರಣೆಯ ಪ್ರಯುಕ್ತ ಸುರಕ್ಷತೆ ಮತ್ತು ಕಾನೂನು ಉಲ್ಲಂಘನಾ ಕೃತ್ಯ ಸಂಭವಿಸಿದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿ ಇಂದು ಮದ್ಯ ಮಾರಾಟಕ್ಕೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.


