ಉಡುಪಿ: ಇಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.೧೫ರಂದು ಉಡುಪಿಯ ವಿವಿಧ ಕಡೆಗಳಿಗೆ ಭೇಟಿ ನೀಡಲಿದ್ದಾರೆ.
ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿ ಕೃಷ್ಣಮಠದಲ್ಲಿ ದೇವರ ದರ್ಶನ ಪಡೆದು ಕಡಿಯಾಳದಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಲಿದ್ದಾರೆ.
ನಂತರ ಇವರು ಹಿರಿಯ ಕಾರ್ಯಕರ್ತರ ಮನೆಗೆ ಭೇಟಿ ಸಂಜೆ ಆರು ಮೂವತ್ತಕ್ಕೆ ಕಾರ್ಕಳದ ಮಿಯ್ಯಾರು ಕಂಬಳದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


