ಕಿನ್ನಿಗೋಳಿ: ಚಿರತೆಯೊಂದು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದು ಅದರ ಶವ ಸಾನದ ಬಳಿ ಪತ್ತೆಯಾದ ಘಟನೆ ಕಿನ್ನಿಗೋಳಿ ಸಮೀಪದ ಉಳೆಪಾಡಿಯಲ್ಲಿ ನಡೆದಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿನ್ನಿಗೋಳಿ ಸುತ್ತಮುತ್ತ ಹಲವು ಬಾರಿ ಚಿರತೆ ಕಂಡುಬಂದಿದ್ದು ಅನೇಕ ಸಾಕುನಾಯಿಗಳ ಮೇಲೆ ಇದು ಆಕ್ರಮಣ ಮಾಡುತ್ತಿತ್ತು.
ಚಿರತೆ ಹಲವು ಕಡೆಗಳಲ್ಲಿ ಓಡಾಡುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.


