ಚೆನ್ನೈ: ಸಂಗೀತ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವಂತಹ ಖ್ಯಾತ ಸಂಗೀತಗಾರ, ಸಂಗೀತ ಕ್ಷೇತ್ರದ ದಿಗ್ಗಜ ಎ.ಆರ್ ರೆಹಮಾನ್ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಿಗ್ಗೆ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಚೆನ್ನೈ ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಗಿದೆ.
ಇನ್ನೂ ಕೆಲವು ದಿನ ಆಸ್ಪತ್ರೆಯಲ್ಲೇ ಉಳಿಯಲಿರುವ ಎ.ಆರ್ ರೆಹಮಾನ್ ಅವರಿಗೆ ಆಂಜಿಯೋಗ್ರಾಂ ಶಸ್ತ್ರಚಿಕಿತ್ಸಿಗೆ ಒಳಗಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.


