ಮಂಗಳೂರು: ರಾಜ್ಯಕ್ಕೆ ಮತ್ತು ಇತರ ಸ್ಥಳಕ್ಕೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ವಿದೇಶಿ ಪ್ರಜೆಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಮಂಗಳೂರು ಪೊಲೀಸರು ಡ್ರಗ್ಸ್ ಮಾಫಿಯಾದ ಕಿಂಗ್ ಪಿನ್ ನೈಜೀರಿಯಾ ಪ್ರಜೆಯನ್ನು ಬೆಂಗಳೂರಿನಲ್ಲಿ ಖೆಡ್ಡಾಕ್ಕೆ ಕೆಡವಿದ್ದಾರೆ. ಆತನಿಂದ ಕೆಜಿಗಟ್ಟಲೇ ಎಂಡಿಎಂಎ ವಶಕ್ಕೆ ಪಡೆದಿದ್ದು, ಇದರ ಮೌಲ್ಯ ಕೋಟ್ಯಾಂತರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ನೈಜೀರಿಯಾ ಪ್ರಜೆಯ ಜತೆಗೆ ಇಬ್ಬರು ಸೌತ್ ಆಫ್ರಿಕಾ ಮೂಲದ ಇಬ್ಬರು ಮಹಿಳೆರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇವರಿಬ್ಬರು ಡ್ರಗ್ ಪೆಡ್ಲರ್ ಗಳಾಗಿದ್ದು ರಾಜ್ಯದ ವಿವಿದೆಡೆ ಡ್ರಗ್ ಸಪ್ಲೈ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ಕುಖ್ಯಾತ ಡ್ರಗ್ ಮಾಫಿಯಾ ಗ್ಯಾಂಗ್ ಶ್ರೀಮಂತ ಹಾಗೂ ಮಧ್ಯಮ ವರ್ಗದ ಕುಟುಂಬದ ಕಾಲೇಜ್ ವಿದ್ಯಾರ್ಥಿಗಳನ್ನು ಹದಿ ಹರೆಯದ ಯುವಕ ಯುವತಿಯರನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.


