ಉಡುಪಿ: ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ಹೃದಯಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿದೆ. ಯಾವುದೇ ರೀತಿಯ ಅನಾರೋಗ್ಯವಿಲ್ಲದಿದ್ದರೂ ಯುವ ಸಮುದಾಯ ಸಾವನ್ನಪ್ಪುತ್ತಿದೆ. ಇದೀಗ ಅಂತಹುದೇ ಘಟನೆಯೊಂದು ಉಡುಪಿಯಲ್ಲಿ ನಡೆದಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ.
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿರ್ವ ಗ್ರಾಮದ ಶೋಭರಾಜ್ ಮೃತ ದುರ್ದೈವಿಯಾಗಿದ್ದಾರೆ.
ಈ ಹಿಂದೆ ಶೋಭರಾಜ್ ಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇರಲಿಲ್ಲ. ಆದರೂ ದಿಢೀರ್ ಸಾವನ್ನಪ್ಪಿದ್ದಾರೆ. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

