ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಕ್ಯಾಂಡಲ್ ಉರಿಸಿಟ್ಟು ಇಸ್ಪೀಟು ಜುಗಾರಿ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಬೀಡಿನಗುಡ್ಡೆ ಮಹಾತ್ಮಗಾಂಧಿ ಬಯಲುರಂಗ ಮಂದಿರದ ಬಳಿ ನಡೆದಿದೆ.
ಆಟಕ್ಕೆ ಬಳಸಿದ ಮೂವತ್ತೆರಡು ಸಾವಿರದ ಎಂಟುನೂರು ನಗದು ಸಹಿತ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲವು ದಿನಗಳ ಹಿಂದೆ ಕೂಡಾ ಜುಗಾರಿ ಆಡುತ್ತಿದ್ದವರನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಇದು ಒಂದು ರೀತಿಯಲ್ಲಿ ದಂಧೆಯಾಗಿ ಮುಂದುವರೆಯುತ್ತಿರುವುದರಿಂದ ಈ ಬಗ್ಗೆ ಪೊಲೀಸರು ಅಲರ್ಟ್ ಆಗಿದ್ದಾರೆ.


