ಬೆಳ್ಳುಳ್ಳಿ ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಬಳಸುವ ಮಸಾಲ ಪದಾರ್ಥಗಳಲ್ಲಿ ಒಂದಾಗಿದೆ. ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಕೂಡಾ ಆರೋಗ್ಯಕ್ಕೆ ಅನೇಕ ರೀತಿಯ ಲಾಭಗಳಿವೆ. ಶೀತ, ಕೆಮ್ಮು, ರಕ್ತದೊತ್ತಡ, ಜೀರ್ಣಕ್ರಿಯೆ, ಮಧುಮೇಹ, ತೂಕ ನಿಯಂತ್ರಣದಲ್ಲಿ ಸಹಾಯ ಮಾಡುತ್ತದೆ.
ಬೇಸಿಗೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಅನೇಕ ರೀತಿಯ ಪ್ರಯೋಜನಗಳಿವೆ. ಇದರಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಪೋಷಕಾಂಶಗಳಿವೆ. ಆಹಾರದ ರುಚಿಯನ್ನು ಇದು ಹೆಚ್ಚಿಸುವುದಲ್ಲದೆ ಇದು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ.
ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಅಧಿಕ ರಕ್ತದೊತ್ತಡವನ್ನು ಇದು ನಿವಾರಿಸುತ್ತದೆ. ಬೆಳ್ಳುಳ್ಳಿ ತಲೆನೋವು, ಉರಿಯೂತವನ್ನು ನಿವಾರಿಸುವ ಸಾಮರ್ಥ್ಯವನ್ನೂ ಹೊಂದಿದೆ.

