ಮಂಗಳೂರು: ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನಕಲಿ ಪತ್ರಕರ್ತರ ಹಾವಳಿಗೆ ಶೀಘ್ರವಾಗಿ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕೆಲವರು ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್ ತಯಾರಿಸಿ ಬಳಸುತ್ತಿದ್ದಾರೆ. ಇಂಥವರಿಂದ ಪತ್ರಕರ್ತರ ಹೆಸರಿಗೆ ಮಸಿ ಬಳಿಯುವ ಕೆಲಸ ಆಗುತ್ತಿದೆ.
ದ.ಕ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಕರ್ತರ ಹೆಸರು ದುರ್ಬಳಕೆಯಾಗುವುದನ್ನು ತಡೆಯಲು ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.

