ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನಿಂದ ಬಸವಳಿದ ಜನರಿಗೆ ವರುಣ ತಂಪೆರೆದಿದ್ದಾನೆ. ಮುಂಬರುವ ಐದು ದಿನಗಳಲ್ಲಿ ಮಳೆ ಬರುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿತ್ತು. ಅದರಂತೆ ಇದೀಗ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ ಕೇರಳದಲ್ಲೂ ಮಳೆ ಸುರಿದಿದೆ.
ಕೇರಳದ ಪಾಲಕ್ಕಾಡ್, ಮಲಪ್ಪುರಂ, ವಯನಾಡ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಯ ಜೊತೆಗೆ ಸಾಧಾರಣ ಗಾಳಿ ಬೀಸುವ ಸಾಧ್ಯತೆಯೂ ಇದೆ.
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕೂಡಾ ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗಿದೆ. ಸಾಧಾರಣ ಮಳೆಯಾಗಿರುವುದರಿಂದ ಕರಾವಳಿ ಭಾಗದಲ್ಲಿ ಮೀನುಗಾರಿಕೆಗೆ ನಿರ್ಬಂಧವಿರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.


