ಬೆಳ್ತಂಗಡಿ : ಯಾರೋ ಅಪರಿಚಿತರು ಕಾಡು ದಾರಿಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಘಟನೆ ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ನಡೆದಿದೆ.
ಬೆಳಗ್ಗೆ ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ ಧರ್ಮಸ್ಥಳ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.
ಪೊಲೀಸರು ತನಿಖೆ ಮುಂದುವರೆಸಿದ್ದು ಮಗುವಿನ ಪೋಷಕರ ಪತ್ತೆಗೆ ಬಲೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


