ಬೆಂಗಳೂರು: ಕರ್ನಾಟಕ ಯುವ ಸಬಲೀಕರಣ ಮತ್ತು ರಾಜ್ಯ ಕ್ರೀಡಾ ಪ್ರಾಧಿಕಾರವು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಫಿಟ್ನೆಸ್ ತರಬೇತುದಾರರ ಹುದ್ದೆಗೆ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು ಈ ಹಿನ್ನೆಲೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗುತ್ತಿದೆ.
ಈ ನೇಮಕಾತಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಯವರೆಗೆ ಇರಲಿದ್ದು ಆಕರ್ಷಕ ವೇತನವನ್ನು ನೀಡಲಾಗುತ್ತದೆ. ಎಪ್ರಿಲ್ ಹದಿನೈದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಹತೆ ಮತ್ತು ಷರತ್ತು ಪೂರೈಸದಿದ್ದರೆ ಸಂದರ್ಶನಕ್ಕೆ ಆಯ್ಕೆ ಮಾಡಲಾಗುವುದಿಲ್ಲ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕಡ್ಡಾಯವಾಗಿ ಕನ್ನಡ ಗೊತ್ತಿರಬೇಕು. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪೂರೈಸಿರಬೇಕು. ಗರಿಷ್ಟ ಐವತ್ತೆಂಟು ವಯಸ್ಸಿನವರು ಅರ್ಜಿ ಸಲ್ಲಿಸಬಹುದಾಗಿದೆ.

