ಎರ್ಮಾಳು: ಕೊರಿಯರ್ ಸರ್ವಿಸ್ ಯುವಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಯುವಕ ಘಟನೆ ಎರ್ಮಾಳು ಶ್ರೀ ಜನಾರ್ಧನ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಕೊರಿಯರ್ ಸರ್ವಿಸ್ ಯುವಕನನ್ನು ಅದಮಾರು ಕೆ ಮುಂಡೇಲು ಗಣೇಶ್ ಆಚಾರ್ಯ ರವರ ಮಗ ಶರಣ್ ಆಚಾರ್ಯ ಎಂದು ಗುರುತಿಸಲಾಗಿದೆ.

ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತೀವ್ರ ಗಾಯಗೊಂಡ ಯುವಕನನ್ನು ಉಚ್ಚಿಲದ ಎಸ್ಡಿಪಿಐ ಆಂಬುಲೆನ್ಸ್ ನಲ್ಲಿ ಸಾರ್ವಜನಿಕರ ಸಹಕಾರದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

