ಗಂಗೊಳ್ಳಿ: ಹಳಿಯ ಬದಿಯಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಅಚಾನಕ್ ಆಗಿ ರೈಲು ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಾ.24ರಂದು ಸಂಜೆ ವೇಳೆ ಗಂಗೊಳ್ಳಿಯ ಕುಂದಬಾರಂದಾಡಿ ಗ್ರಾಮದ ಹೂವಿನ ಕಂಬಳ ಗದ್ದೆ ಎಂಬಲ್ಲಿ ನಡೆದಿದೆ.
ತ್ರಾಸಿ ಗ್ರಾಮದ ಹೆರಿಯ(70) ಮೃತ ದುರ್ದೈವಿ. ಕೂಲಿ ಕೆಲಸವನ್ನು ಮುಗಿಸಿಕೊಂಡು ಮನೆಗೆ ವಾಪಾಸ್ಸು ರೈಲ್ವೇ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹೆರಿಯ ಅವರಿಗೆ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ರೈಲು ಢಿಕ್ಕಿ ಹೊಡೆದಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

