ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಇದೀಗ ಬಿಗ್ ಶಾಕ್ ನೀಡಿದೆ. ನಂದಿನಿ ಹಾಲಿನ ದರವನ್ನು ಪ್ರತೀ ಲೀಟರ್ ಗೆ ನಾಲ್ಕು ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಇದರ ಜೊತೆಗೆ ನಂದಿನಿ ಮೊಸರಿನ ದರವೂ ಕೂಡಾ ನಾಲ್ಕು ರೂಪಾಯಿ ಹೆಚ್ಚಾಗಲಿದ್ದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಒಟ್ಟಿನಲ್ಲಿ ಈ ಹೊಸ ಬೆಲೆ ಎಪ್ರಿಲ್ ಒಂದರಿಂದ ಜಾರಿಯಾಗುತ್ತಿದೆ.
ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ರಾಜ್ಯದಲ್ಲಿ ಹೈನೋದ್ಯಮಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ದರ ಪರಿಷ್ಕರಣೆ ಮಾಡಲಾಗಿದೆ.

