ಮಂಗಳೂರು: ನೆತ್ತಿ ಸುಡುತ್ತಿದ್ದ ಬಿಸಿಲಿನಿಂದ ಕರಾವಳಿಗರಿಗೆ ಕೊನೆಗೂ ಸ್ವಲ್ಪ ಮಟ್ಟದಲ್ಲಿ ಮುಕ್ತಿ ಸಿಕ್ಕಿದೆ ಎನ್ನಬಹುದು. ಕರಾವಳಿಯ ಕೆಲವು ಭಾಗಗಳಿಗೆ ಮಳೆರಾಯ ತಂಪೆರಗಿದ್ದಾನೆ. ಉಡುಪಿ ಮತ್ತು ದ.ಕ ಜಿಲ್ಲೆಗಳಲ್ಲಿ ಮಾ.೩೧ರವರೆಗೆ ಅಲ್ಲಲ್ಲಿ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡೂ ದಿನವೂ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ಯಾವುದಾದರೂ ಕಾರ್ಯಕ್ರಮವನ್ನು ಏರ್ಪಡಿಸುವ ಮೊದಲು ಮುಂಜಾಗ್ರತಾ ಕ್ರಮವನ್ನು ಅನುಸರಿಸಿ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಕೆಲವು ಕಡೆ ಗುಡುಗು ಸಹಿತ ಗಾಳಿ ಮಳೆ ಬಂದಿರುವುದರ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂಗೆ ಮಾಹಿತಿ ಸಿಕ್ಕಿದೆ.

