ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಸಮೀಪ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸಿ ಸಾವು ನೋವುಗಳಾಗುತ್ತಿವೆ. ಹಾಗಾಗಿ ಸಮರ್ಪಕ ಸರ್ವಿಸ್ ರಸ್ತೆ ಮತ್ತು ಫ್ಲೈ ಓವರ್ ನಿರ್ಮಾಣಕ್ಕೆ ಆಗ್ರಹಿಸಿ ನಾಳೆ ದಿನಾಂಕ 2 ಏಪ್ರಿಲ್ 2025 ರಂದು ಬ್ರಹ್ಮಾವರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಾಳೆ ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಬೃಹತ್ ಪ್ರತಿಭಟನೆಗೆ ಈಗಾಗಲೆ ಬ್ರಹ್ಮಾವರದ ಸುಮಾರು 23ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ.

