ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬರ ಜೊತೆ ಪೊಲೀಸ್ ಸಿಬ್ಬಂದಿಯೋರ್ವ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿರುದ್ಧವೇ ಸುಮುಟೋ ಕೇಸ್ ದಾಖಲಾಗಿರುವ ಅಪರೂಪದ ಘಟನೆ ಉಡುಪಿಯಲ್ಲಿ ನಡೆದಿದೆ.
ಮಣಿಪಾಲ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶರಣ ಬಸವ ವಿರುದ್ಧ ಪ್ರಕರಣ ದಾಖಲಾಗಿದೆ. ಸುಮಂತ್ ಎಂಬವರ ಜೊತೆ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದರು. ಈ ವಿಚಾರದ ಬಗ್ಗೆ ಸುಮಂತ್ ಪೊಲೀಸರ ಗಮನಕ್ಕೆ ತಂದಿದ್ದು ದೂರು ದಾಖಲಿಸುವುದು ಬೇಡ ಎಂದಿದ್ದರು.
ಆದರೆ ಪೊಲೀಸರೇ ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದಾರೆ. ಪೊಲೀಸರ ವಿರುದ್ಧವೇ ದೂರು ದಾಖಲಾಗಿರುವುದು ಅಪರೂಪ.

