ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ. ಬಸವರಾಜ ಜಿ ಹುಬ್ಬಳ್ಳಿ ಇವರನ್ನು ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ.
ಡಾ. ಬಸವರಾಜ ಜಿ ಹುಬ್ಬಳ್ಳಿ ಶಿವಮೊಗ್ಗ ಜಿಲ್ಲೆಯ, ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಡಾ. ಬಸವರಾಜ ಜಿ ಹುಬ್ಬಳ್ಳಿ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಉಡುಪಿ ಜಿಲ್ಲೆ-ಖಾಲಿ ಜಾಗಕ್ಕೆ ವರ್ಗಾಯಿಸಿ ಆದೇಶಿಸಿದೆ.


