ಮಂಗಳೂರು: ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಮ್ಮ ಪೋಷಕರೊಂದಿಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿದ್ದಾರೆ. ಈ ಸಂದರ್ಭ ಪ್ರಧಾನಿಗೆ ತುಳುನಾಡಿನ ಸಂಸ್ಕೃತಿಯ ಪ್ರತೀಕವಾಗಿರುವ ಹುಲಿ ವೇಷದ ಮುಖವಾಡವನ್ನು ಸ್ಮರಣಿಕೆ ರೂಪದಲ್ಲಿ ನೀಡಿದ್ದಾರೆ.
ಇದರ ಜೊತೆಗೆ ಮಂಗಳೂರು ಕಂಬಳದ ಫೋಟೋ ಫ್ರೇಮ್ ಮತ್ತು ಕೊಲ್ಲೂರು ಮೂಕಾಂಬಿಕೆ ದೇಗುಲದ ಪ್ರಸಾದ ನೀಡುವ ಮೂಲಕ ಒದಗಿದ ಅವಕಾಶದ ಬಗ್ಗೆ , ಈ ಗೌರವದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.
ಸಂಸದ ಚೌಟ ಅವರು ತಂದೆ ಸೇಸಣ್ಣ ಚೌಟ ಹಾಗೂ ತಾಯಿ ಪುಷ್ಪಾ ಚೌಟ ಅವರೊಂದಿಗೆ ನರೇಂದ್ರ ಮೋದಿ ಅವರನ್ನು ಅವರ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿದ್ದಾರೆ. ನಂತರ ಅವರ ಆಶೀರ್ವಾದ ಮತ್ತು ಮಾರ್ಗದರ್ಶನವನ್ನು ಪಡೆದಿದ್ದಾರೆ.

