ಬ್ರಹ್ಮಾವರ ತಾಲ್ಲೂಕಿನ ಪೇತ್ರಿ ಸಮೀಪ ಟಿಪ್ಪರ್ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ಯುವಕದಾರುಣವಾಗಿ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಸೋಮೇಶ್ವರದ ಸಮೀಪದ ಕೂಡ್ಲು ಫಾಲ್ಸ್ ಗೆ ಪ್ರವಾಸಕ್ಕೆ ಹೋಗಿದ್ದ ಯುವಕರು ಹಿಂದಿರುಗಿ ಬರುವಾಗ ಅಪಘಾತ ಸಂಭವಿಸಿದ್ದು ಒಬ್ಬ ಯುವಕ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯುವಕರು ಸಾಸ್ತಾನದ ಗೋಳಿಬೆಟ್ಟಿನವರಾಗಿದ್ದು, ದೀಕ್ಷಿತ್ ದೇವಾಡಿಗ ( 24) ಮತ್ತು ಅಭಿಜಿತ್ ಮೊಗವೀರ (24) ಎಂದು ಗುರುತಿಸಲಾಗಿದೆ.


