ಬ್ರಹ್ಮಾವರದ ಪೇತ್ರಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರುವುದಾಗಿ ತಿಳಿದುಬಂದಿದೆ.
ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾಸ್ತಾನ ಐರೋಡಿ ಗೋಳಿಬೆಟ್ಟಿನ ಯುವಕ ಅಭಿಜಿತ್ ಮೊಗವೀರ ಗಂಭೀರ ಗಾಯ ಗೊಂಡಿದ್ದರು. ಮೊದಲು ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಯುವಕನ ಆರೋಗ್ಯದಲ್ಲಿ ಚೇತರಿಗೆ ಕಂಡುಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.

