ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಎಸ್.ಪಿ ವೃಂದದ ನಾಲ್ವರು ಅಧಿಕಾರಿಗಳನ್ನು ಬೇರೆ ಬೇರೆ ಸ್ಥಳಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ನಿಯುಕ್ತಿಗೊಳಿಸಿ ಆದೇಶಿಸಿದೆ.
ಪೊಲೀಸ್ ಅಧಿಕಾರಿಗಳಾದ ಸುಧಾಕರ್ ಎಸ್. ನಾಯ್ಕ ಉಡುಪಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ, ಬಿ.ಪಿ ದಿನೇಶ್ ಕುಮಾರ್ ಕೊಡಗು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ, ಹಾಗೂ ಮೊಹಮ್ಮದ್ ಸಜ್ಜದ್ ಖಾನ್ ಬೆಂಗಳೂರು ಪೊಲೀಸ್ ಅಧೀಕ್ಷಕರಾಗಿ ಮತ್ತು ಎಸ್.ಎಸ್ ಕಾಶಿ ಅವರು ಕೂಡಾ ವರ್ಗಾವಣೆಗೊಂಡ ಅಧಿಕಾರಿಗಳಾಗಿದ್ದಾರೆ.
ಅದೇ ರೀತಿ ಮೈಸೂರು ಪೊಲೀಸ್ ಅಧೀಕ್ಷಕರಾದ ಎ.ಆರ್ ಕರ್ನೂಲ್ ಅವರನ್ನು ಕಲಬುರಗಿಯಲ್ಲಿ ಖಾಲಿ ಇರುವ ಅದೇ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.


