ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಇದೀಗ ಕೇಂದ್ರ ಸರ್ಕಾರ ದೇಶದ ಜನತೆಗೆ ಮತ್ತೆ ಶಾಕ್ ನೀಡಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬಳಿಕ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಐವತ್ತು ರೂಪಾಯಿ ಹೆಚ್ಚಳ ಮಾಡಿರುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಉಜ್ವಲ ಮತ್ತು ಉಜ್ವಲೇತರ ಗ್ರಾಹಕರಿಗೂ ಬೆಲೆ ಏರಿಕೆ ಅನ್ವಯವಾಗುತ್ತದೆ.
ಆದ್ದರಿಂದ ಇನ್ಮುಂದೆ ಉಜ್ವಲ ಯೋಜನೆಯ 503 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್ಗೆ 553 ರೂ. ಹಾಗೂ ಇತರೇ ಗ್ರಾಹಕರು 803 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್ಗೆ 853 ರೂ. ಪಾವತಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ. ಇದರಿಂದ ಮತ್ತೆ ಗ್ರಾಹಕರಿಗೆ ಸಿಲಿಂಡರ್ ಬೆಲೆ ತಲೆನೋವಾಗಿದೆ.


