ಕರ್ನಾಟಕ ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಒಂದಲ್ಲ ಒಂದು ರೀತಿಯ ಉದ್ಯೋಗವಕಾಶಗಳನ್ನು ನೀಡುತ್ತಿರುತ್ತದೆ. ಇದೀಗ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ನೇರ ಸಂದರ್ಶನದ ಮೂಲಕ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳು ತಾತ್ಕಾಲಿಕ ಮತ್ತು ಗುತ್ತಿಗೆ ಆಧಾರದಲ್ಲಿರುತ್ತದೆ. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ನೇರವಾಗಿ ಆಯ್ಕೆ ಆಗುತ್ತಾರೆ.
ಬೆಂಗಳೂರಿನ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಚೇರಿಯಲ್ಲಿ ಸಂದರ್ಶನ ಇರಲಿದೆ. ನಿಗದಿತ ಸಮಯದ ನಂತರ ಬಂದ ಅಭ್ಯರ್ಥಿಗಳಿಗೆ ಅನುಮತಿ ಇರುವುದಿಲ್ಲ.

