ಉಡುಪಿ: ದ್ವಿತೀಯ ಪಿಯುಸಿ ಫಲಿತಾಂಶ ಈಗಾಗಲೇ ಹೊರಬಿದ್ದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಒಟ್ಟು ಎಪ್ಪತ್ನಾಲ್ಕು ಶೇಕಡ ಪಡೆದುಕೊಂಡಿದ್ದು ಬುದ್ಧಿವಂತರ ಜಿಲ್ಲೆ ಉಡುಪಿಗೆ ಮೊದಲ ಸ್ಥಾನ ಲಭಿಸಿದೆ.
ದ.ಕ ಜಿಲ್ಲೆ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಪ್ರಥಮ ಸ್ಥಾನ ಪಡೆದಿದ್ದು, ಕಲಾ ವಿಭಾಗದಲ್ಲಿ ಬಳ್ಳಾರಿಯ ವಿದ್ಯಾರ್ಥಿನಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾಳೆ.
ರಾಜ್ಯದ ಸುಮಾರು ಆರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು.
ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ
https://karresults.nic.in/slpufirst25_1.asp

