ಕುಂದಾಪುರ : ನಗರದ ಚಿಕನ್ ಸಾಲು ರಸ್ತೆಯಲ್ಲಿರುವ ಕಿರಾಣಿ ಅಂಗಡಿಯೊಂದಕ್ಕೆ ಬುಧವಾರ ಬೆಂಕಿ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಚಂದ್ರಶೇಖರ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದ್ದು, ಮಾಲಕರು ಬೆಳಿಗ್ಗೆ ಅಂಗಡಿಯ ಬಾಗಿಲನ್ನು ತೆರೆದು ದೇವರಿಗೆ ದೀಪ ಹಚ್ಚಿ ಹತ್ತಿರದ ಶ್ರೀ ಮೈಲಾರೇಶ್ವರ ದೇವಸ್ಥಾನಕ್ಕೆ ಹೋಗಿದ್ದರು. ಕೆಲವೇ ನಿಮಿಷಗಳಲ್ಲಿ ಮರಳಿ ಬರುವುದರೊಳಗೆ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ.

ಘಟನೆಯಿಂದ ಅಂದಾಜು 4 ಲಕ್ಷ ರೂ.ನಷ್ಟ ಸಂಭವಿಸಿದ್ದು, ಅಂಗಡಿಯೊಳಗಿದ್ದ ಹೊಸ ಫ್ರಿಜ್, ಕಪಾಟು, ಶೋಕೇಸ್ ಮುಂತಾದ ಉಪಕರಣಗಳು, ಕಿರಾಣಿ ಸಾಮಗ್ರಿಗಳು ಸಂಪೂರ್ಣ ಸುಟ್ಟುಹೋಗಿವೆ.

