ಸುಬ್ರಹ್ಮಣ್ಯ: ದ.ಕ ಜಿಲ್ಲೆಯ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಎಪ್ರಿಲ್ ಹನ್ನೆರಡರಂದು ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದ್ದು ಈ ಬಗ್ಗೆ ರೈಲ್ವೇ ಇಲಾಖೆಯ ರಾಜ್ಯ ಖಾತೆ ವಿ. ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ.
ದಿನಕ್ಕೆ ನಾಲ್ಕು ಬಾರಿ ಈ ರೈಲು ಬೆಂಗಳೂರು-ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರ ಮಾಡಲಿದೆ. ಅತ್ಯಂತ ಕಡಿಮೆ ಖರ್ಚಿನಲ್ಲಿ ಬೇರೆ ಊರಿನ ಜನರು ಕೂಡಾ ದೇಗುಲದ ದರ್ಶನಕ್ಕೆ ಆಗಮಿಸಬಹುದು.
ಇನ್ನು ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಿ.ಸೋಮಣ್ಣ ಅವರು ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೇ ಇಲಾಖೆಗೂ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದಾರೆ ಎಂದು ಹೇಳಿದ್ದಾರೆ.

